Select Your Language

Notifications

webdunia
webdunia
webdunia
webdunia

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

R Ashoka

Krishnaveni K

ಬೆಂಗಳೂರು , ಶುಕ್ರವಾರ, 10 ಅಕ್ಟೋಬರ್ 2025 (13:31 IST)
ಬೆಂಗಳೂರು: ಬಿಹಾರ ಚುನಾವಣೆ ಖರ್ಚಿಗೆ ಕಾಂಗ್ರೆಸ್ ಹೈಕಮಾಂಡ್ ಗೆ 300 ಕೋಟಿ ರೂ. ಕೊಟ್ಟು ಅದರ ಬದಲಾಗಿ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಆಫರ್ ನೀಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಬಿಜೆಪಿ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಹುಲ್ ಗಾಂಧಿ ಅವರ #ATMSarkara ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ?

ಬಿಹಾರ ಚುನಾವಣೆಗಾಗಿ ಹೈಕಮಾಂಡ್ ಗೆ 300 ಕೋಟಿ ರೂಪಾಯಿ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕರ್ಮಕಾಂಡ ನೋಡುತ್ತಿದ್ದರೆ ಇನ್ನು ಸಿಎಂ, ಡಿಸಿಎಂ, ಮಂತ್ರಿಗಳು ತಮ್ಮ ಇರುವ ಕುರ್ಚಿ ಉಳಿಸಿಕೊಳ್ಳಲು ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡ ನೀವೇ ಊಹಿಸಿಕೊಳ್ಳಿ.

ಒಂದು ಕಡೆ ಜನರಿಗೆ ಕ್ಯಾಸಿನೋ, ಜೂಜು, ಬೆಟ್ಟಿಂಗ್ ಆಡಿಸಿ ಬಡವರ ಮನೆಹಾಳು ಮಾಡಿ ಅಡ್ಡದಾರಿಯಲ್ಲಿ ದುಡ್ಡು ಮಾಡುವುದು. ಆ ಪಾಪದ ಹಣದಲ್ಲಿ ಟಿಕೆಟ್ ಪಡೆದು, ಚುನಾವಣೆ ಎದುರಿಸಿ, ಹೈಕಮಾಂಡ್ ಗೆ ಕಪ್ಪ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವುದು. ಆಮೇಲೆ ಮಂತ್ರಿಗಿರಿ ಬಳಸಿಕೊಂಡು ಇನ್ನಷ್ಟು ಲೂಟಿ ಮಾಡುವುದು. ಇದು ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಹೆಣೆದಿರುವ ವಿಷ ವರ್ತುಲ.

ತೆಲಂಗಾಣ ಚುನಾವಣೆಗೆ, ಲೋಕಸಭೆ ಚುವಾವಣೆಗೆ ವಾಲ್ಮೀಕಿ ನಿಗಮದ ಹಣ ಸೇರಿದಂತೆ ಸಾವಿರಾರು ಕೋಟಿ ಲಪಟಾಯಿಸಿದ್ದಾಯ್ತು. ಈಗ ಬಿಹಾರ ಚುನಾವಣೆಗೆ ಕನ್ನಡಿಗರ ತೆರಿಗೆ ಹಣ ಇನ್ನೆಷ್ಟು ಲೂಟಿ ಆಗುತ್ತದೆಯೋ ಗೊತ್ತಿಲ್ಲ.

ಈ ರೀತಿ ಪಾಪದ ಹಣದಲ್ಲಿ ಚುನಾವಣೆ ನಡೆಸುವ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಪ್ರಕ್ರಿಯೆ ಬಗ್ಗೆ, ಚುನಾವಣಾ ಆಯೋಗದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ?

ನಾಚಿಕೆಯಾಗಬೇಕು ಕಾಂಗ್ರೆಸ್ ಪಕ್ಷಕ್ಕೆ. ಅಂದಹಾಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ
ಡಿಕೆ ಶಿವಕುಮಾರ್ ಅವರು ಬಿಹಾರ ಚುನಾವಣೆಗೆ ಎಷ್ಟು ಕೋಟಿ ಹಣ ಲೂಟಿ ಮಾಡಿ ರಾಹುಲ್ ಗಾಂಧಿ ಅವರಿಗೆ ಚಂದಾ ನೀಡುವ ಭರವಸೆ ಕೊಟ್ಟಿದ್ದಾರೆ?’ ಎಂದು ಕಿಡಿ ಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ