ಹಿಂದೂಗಳೇ ಟಾರ್ಗೆಟ್, ರಾಹುಲ್ ಗಾಂಧಿ ಲೆಕ್ಕದಲ್ಲಿ ಹಿಂದೂಗಳು ಎರಡನೆಯ ದರ್ಜೆಯವರಾ: ಆರ್ ಅಶೋಕ್

Krishnaveni K
ಶನಿವಾರ, 20 ಸೆಪ್ಟಂಬರ್ 2025 (10:31 IST)
ಬೆಂಗಳೂರು: ಜಾತಿಗಣತಿ, ದಸರಾ ಉದ್ಘಾಟನೆ ವಿವಾದದ ಬಳಿಕ ಈಗ ಕರ್ನಾಟಕದಲ್ಲಿರುವ  ಹಿಂದೂ ದೇವಾಲಯಗಳ ಸೇವಾ ಶುಲ್ಕ ಹೆಚ್ಚಿಸಿರುವ ಸರ್ಕಾರದ ವಿರುದ್ಧ ಕಿಡಿ ಕಾರಿರುವ ವಿಪಕ್ಷ ನಾಯಕ ಆರ್ ಅಶೋಕ್ ಹಿಂದೂಳೇ ಟಾರ್ಗೆಟ್, ರಾಹುಲ್ ಗಾಂಧಿ ಲೆಕ್ಕದಲ್ಲಿ ಹಿಂದೂಗಳು ಎರಡನೆಯ ದರ್ಜೆಯವರಾ ಎಂದು ಪ್ರಶ್ನಿಸಿದ್ದಾರೆ.

ದೇವಾಲಯಗಳ ಸೇವಾ ಶುಲ್ಕ ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಏರಿಕೆ ಮಾಡಲಾಗಿದೆ. ಇದರ ಬಗ್ಗೆ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಗೆ ಹಿಂದೂಗಳಿಗೆ ಕಿರುಕುಳ ಕೊಡುವುದರಲ್ಲಿ ಏನು ಸಂತೋಷ ಸಿಗುತ್ತದೆ ಎಂದಿದ್ದಾರೆ.
‘ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅದೆಂತಹ ವಿಕೃತ ಸಂತೋಷ ಸಿಗುತ್ತೋ ಗೊತ್ತಿಲ್ಲ.

ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ನಮ್ಮ ಸಂಸ್ಕೃತಿಯ ಪ್ರತೀಕವಾದ ಹರಿಷಿಣ, ಕುಂಕುಮದ ಮೇಲೆ ನಂಬಿಕೆ ಇಲ್ಲದ ಅನ್ಯಧರ್ಮೀಯರಿಂದ ದಸರಾ ಉದ್ಘಾಟನೆ ಮಾಡಿಸುವ ಹಠ ಸಾಧಿಸಿದ್ದಾಯಿತು.

ದುಬಾರಿ ಪಾಸ್ ನೆಪದಲ್ಲಿ ಜನಸಾಮಾನ್ಯರಿಗೆ ದಸರಾ ವೀಕ್ಷಣೆ ಕಷ್ಟಸಾಧ್ಯ ಮಾಡಿದ್ದಾಯ್ತು. ಈಗ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ.

ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ?’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments