ಬೆಂಗಳೂರು: ಅತಿವೃಷ್ಟಿಯಿಂದ ತತ್ತರಿಸಿದ್ದ ರೈತರಿಗೆ ರಾಜ್ಯ ಸರ್ಕಾರ ಪರಿಹಾರ ಕೊಡುವುದಾಗಿ ಭರವಸೆ ನಿಡಿದ್ದಷ್ಟೇ ಹೊರತು ಇದುವರೆಗೆ ಪರಿಹಾರ ನೀಡಿಲ್ಲ. ಇದರ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ರಾಜ್ಯವನ್ನು ತರಾಟೆಗೆ ತೆಗೆದುಕೊಂಡಿರುವ ಅವರು ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ.
ಕಾಟಾಚಾರಕ್ಕೆ ವೈಮಾನಿಕ ಸಮೀಕ್ಷೆ ಮಾಡಿ 30 ದಿನಗಳೊಳಗೆ ನೆರೆ ಪರಿಹಾರ ಕೊಡುತ್ತೇವೆ ಎಂದು ಹೇಳಿದರಲ್ಲ ಸಿಎಂ ಸಿದ್ದರಾಮಯ್ಯನವರೇ, ಎಲ್ಲಿ ಹೋಯಿತು ನಿಮ್ಮ ನುಡಿಯಂತೆ ನಡೆಯುವ ಸರ್ಕಾರದ ಬದ್ಧತೆ?
ಪಾಪ ನೀವು ತಾನೇ ಏನು ಮಾಡುತ್ತೀರಿ ಬಿಡಿ. ಅತ್ತ ರಾಹುಲ್ ಗಾಂಧಿ ಅವರು ಭೇಟಿ ಮಾಡುವುದಕ್ಕೂ ಸಮಯ ಕೊಡುತ್ತಿಲ್ಲ. ಇತ್ತ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಮೇಲೆ ಡೆಡ್ ಲೈನ್ ಕೊಟ್ಟರೂ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಇನ್ನು ನೆರೆ ಪರಿಹಾರ, ಕಬ್ಬು, ಜೋಳ ಬೆಳೆಗಾರರಿಗೆ ಹೆಚ್ಚುವರಿ ಬೆಂಬಲ ಬೆಲೆ ಕೊಡಬೇಕು ಅಂದರೆ ನಿಮ್ಮ ಮಾತು ಯಾರು ಕೇಳುತ್ತಾರೆ? Outgoing ಸಿಎಂ ಸಿದ್ದರಾಮಯ್ಯನವರ ಅಸಹಾಯಕತೆ ನೋಡಿದರೆ ನಿಜಕ್ಕೂ ಕನಿಕರ ಮೂಡುತ್ತಿದೆ ಎಂದಿದ್ದಾರೆ.