Publish Date: Tue, 28 Oct 2025 (11:53 IST)
Updated Date: Tue, 28 Oct 2025 (11:55 IST)
ಬೆಂಗಳೂರು: ಟನೆಲ್ ರೋಡ್ ಅತ್ಲಾಗಿ ಇರಲಿ ಸ್ವಾಮಿ ಮೊದಲು ಶಿಕ್ಷಕರಿಗೆ ಸಂಬಳ ಕೊಡಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಾಲಿಕೆ ವ್ಯಾಪ್ತಿಯ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿನಿಂದ ಸಂಬಳ ಬಂದಿಲ್ಲ. ಈ ಶಿಕ್ಷಕರಿಗೆ ಪಿಎಫ್, ಇಎಸ್ಐ ಸೌಲಭ್ಯವೂ ಇಲ್ಲ. ನಾಲ್ಕು ತಿಂಗಳಿನಿಂದ ವೇತನ ಬಾರದೇ ಶಿಕ್ಷಕರು ಸಂಷಕ್ಟದಲ್ಲಿದ್ದಾರೆ. ಈ ಬಗ್ಗೆ ಆರ್ ಅಶೋಕ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಟನಲ್ ರೋಡ್ ಬಿಡಿ ಸ್ವಾಮಿ ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ. ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಸುರಂಗ ರಸ್ತೆ ಮಾಡ್ತೀನಿ, ಸ್ಕೈ ಡೆಕ್ ಮಾಡ್ತೀನಿ, ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ, ಜಿಬಿಎ ಮಾಡ್ತೀನಿ ಅಂತ ಬರೀ ಓಳು ಬಿಟ್ಟು ಕನ್ನಡಿಗರಿಗೆ ಚೊಂಬು ಕೊಟ್ಟಿದ್ದೇ ನಿಮ್ಮ ಸಾಧನೆ.
ನಿಮ್ಮ ಜಿಬಿಎ ಅವ್ಯವಸ್ಥೆಯಿಂದ ಪಾಲಿಕೆ ಶಿಕ್ಷಕರು ಕಳೆದ 4 ತಿಂಗಳಿಂದ ಸಂಬಳವಿಲ್ಲದೆ ಸಂಸಾರ ತೂಗಿಸಲು ಪರದಾಡುತ್ತಿದ್ದಾರೆ. ಮೊದಲು ಅವರಿಗೆ ಬಾಕಿ ವೇತನ ಬಿಡುಗಡೆ ಮಾಡಿ ಶಿಕ್ಷರರ ಸಮಸ್ಯೆ ಬಗೆಹರಿಸಿ ಎಂದಿದ್ದಾರೆ.