ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

Krishnaveni K
ಶುಕ್ರವಾರ, 5 ಡಿಸೆಂಬರ್ 2025 (14:21 IST)
ಬೆಂಗಳೂರು: ಉಪಲೋಕಾಯುಕ್ತ ನ್ಯಾ ವೀರಪ್ಪ ಹೇಳಿದಂತೆ ಕರ್ನಾಟಕದಲ್ಲಿ ಶೇ63 ರಷ್ಟು ಭ್ರಷ್ಟಾಚಾರ ಯಾರ ಕಾಲದಲ್ಲಿ ಆಗಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಆರೋಪಕ್ಕೆ ಆರ್ ಅಶೋಕ್ ಮತ್ತೆ ತಿರುಗೇಟು ನೀಡಿದ್ದಾರೆ.

ಭ್ರಷ್ಟಾಚಾರವಾಗಿದ್ದು ಬಿಜೆಪಿ ಕಾಲದಲ್ಲಿ. ಆ ವರದಿಯನ್ನು ಉಲ್ಲೇಖಿಸಿ ಉಪಲೋಕಾಯುಕ್ತರು ಹೇಳಿಕೆ ನೀಡಿದ್ದಾರೆ. ಬಿಜೆಪಿಯವರು ನಮ್ಮ ತಲೆಗೆ ಪಾಪದ ಗಂಟು ಕಟ್ಟಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಆರ್ ಅಶೋಕ್ ‘ಸಿದ್ದರಾಮಯ್ಯನವರೇ ನಿನ್ನೆ ತಡರಾತ್ರಿ ನೀವು ಅದನ್ನು ಲೋಕಾಯುಕ್ತ ವರದಿ ಎಂದು ಸುಳ್ಳು ಹೇಳಿದ ನಂತರ, ಈಗ ಅದನ್ನು 'ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್ ವರದಿ' ಎಂದು ಸದ್ದಿಲ್ಲದೆ ತಿದ್ದುಕೊಂಡಿರುವುದು ಸಂತೋಷದ ಸಂಗತಿ. ಆದರೆ ಈಗ, ಕೆಲವು ಸತ್ಯಾಂಶಗಳನ್ನು ಸ್ಪಷ್ಟಪಡಿಸೋಣ.

ನ್ಯಾಯಮೂರ್ತಿ ಬಿ. ವೀರಪ್ಪ ಅವರು ಉಲ್ಲೇಖಿಸಿರುವ ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್ ವರದಿಯು ನವೆಂಬರ್ 2019 ರಲ್ಲಿ ಬಿಡುಗಡೆಯಾಗಿತ್ತು, ಆದರೆ ಅದು ಹಿಂದಿನ ವರ್ಷದ ಭ್ರಷ್ಟಾಚಾರದ ಕುರಿತು ನಡೆಸಿದ ಸಮೀಕ್ಷೆ ಆಗಿತ್ತು.

ಇದರ ಅರ್ಥ, ಆ ವರದಿಯ ದತ್ತಾಂಶವು 2018ರ ಅವಧಿಯನ್ನು ಪ್ರತಿಬಿಂಬಿಸುತ್ತದೆ. 2018ರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದವರು ಯಾರು? ಮಾನ್ಯ ಸಿದ್ದರಾಮಯ್ಯ ಅವರೇ, ಅದು ತಾವೇ ಹೊರತು ಬೇರೆ ಯಾರೂ ಅಲ್ಲ.

ಆದ್ದರಿಂದ ಈ ವರದಿಯನ್ನು ಬಿಜೆಪಿ ಕಡೆಗೆ ತಿರುಚುವ ಬದಲು, ನಿಮ್ಮ ಆಡಳಿತಾವಧಿಯಲ್ಲಿ ಕರ್ನಾಟಕದ 63% ನಾಗರಿಕರು ಏಕೆ ಲಂಚ ನೀಡಬೇಕಾಯಿತು ಎಂಬುದನ್ನು ನೀವೇ ಮೊದಲು ವಿವರಿಸಬೇಕು.

ಮತ್ತೆ ಇದೊಂದೇ ವರದಿ ನಿಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದಿಲ್ಲ. 2017 ರಲ್ಲಿ, ಮತ್ತೊಂದು ರಾಷ್ಟ್ರೀಯ ಸಮೀಕ್ಷೆಯು ಆಗ ರಾಜ್ಯದಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಸರ್ಕಾರವನ್ನು ಭಾರತದ ಅತ್ಯಂತ ಭ್ರಷ್ಟ ರಾಜ್ಯ ಎಂದು ಘೋಷಿಸಿತ್ತು.

ಕರ್ನಾಟಕ ಕಂಡ ಅತ್ಯಂತ ಭ್ರಷ್ಟಾತಿ ಭ್ರಷ್ಟ ಸರ್ಕಾರಗಳನ್ನು ಮುನ್ನಡೆಸಿದ, ಮುನ್ನಡೆಸುತ್ತಿರುವ ತಾವು ಇನ್ನೊಬ್ಬರಿಗೆ ನೀತಿ ಪಾಠ ಹೇಳುವುದು ಹಾಸ್ಯಾಸ್ಪದ ಮತ್ತು ಉದ್ಧಟತನ.

ನಿಮ್ಮ ಸರ್ವೋಚ್ಚ ನಾಯಕ ರಾಹುಲ್ ಗಾಂಧಿ ಅವರ ಮೂರ್ಖತನವನ್ನು ದೇಶವು ಕ್ಷಮಿಸಬಹುದು, ಆದರೆ ಕರ್ನಾಟಕದ ಜನತೆ ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರಗಳನ್ನು ಮುನ್ನಡೆಸಿದ ನಿಮ್ಮನ್ನ, ನಿಮ್ಮ ಕಾಂಗ್ರೆಸಸ್ ಪಕ್ಷದ ನಿರ್ಲಜ್ಜತೆಯನ್ನು ಎಂದಿಗೂ ಕ್ಷಮಿಸುವುದಿಲ್ಲ.

ಸಿಎಂ ಸಿದ್ದರಾಮಯ್ಯ ಅವರೇ, ಇತರರತ್ತ ಬೆರಳು ತೋರಿಸುವ ಮೊದಲು ನಿಮ್ಮದೇ ಘನ ಸರ್ಕಾರ ವರ್ಷದಿಂದ ವರ್ಷಕ್ಕೆ ಕರ್ನಾಟಕವನ್ನು ಭ್ರಷ್ಟಾಚಾರದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಇರಿಸಲು ಕಾರಣವೇನು ಎಂಬುದಕ್ಕೆ ಮೊದಲು ಉತ್ತರಿಸಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments