ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

Krishnaveni K
ಗುರುವಾರ, 30 ಅಕ್ಟೋಬರ್ 2025 (12:09 IST)
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಕೇರಳದ ವಯನಾಡು ಪ್ರವಾಸ ಪ್ರಮೋಷನ್ ಮಾಡಿರುವುದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು ಸಿದ್ದರಾಮಯ್ಯನವರೇ ನೀವು ಕರ್ನಾಟಕದ ಸಿಎಂ, ವಯನಾಡಿನ ವಕ್ತಾರರಲ್ಲ ಎಂದಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸೋಷಿಯಲ್ ಮೀಡಿಯಾ ಪುಟದಲ್ಲಿ ಕಾಂಗ್ರೆಸ್ ಉನ್ನತ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಪ್ರತಿನಿಧಿಸುವ ಕೇರಳದ ವಯನಾಡಿನ ಪ್ರವಾಸೋದ್ಯಮದ ಬಗ್ಗೆ ಜಾಹೀರಾತು ನೀಡಲಾಗಿದೆ. ಇದರ ಬಗ್ಗೆ ಬಿಜೆಪಿ ನಾಯಕರು ತೀವ್ರ ಟೀಕೆ ನಡೆಸಿದ್ದಾರೆ.

 ಈ ಬಗ್ಗೆ ವಾಗ್ದಾಳಿ ನಡೆಸಿರುವ ಆರ್ ಅಶೋಕ್, ಕರ್ನಾಟಕದ ಸಿಎಂ ಎಂದು ಮರೆತು ಕೇರಳದ  ವಕ್ತಾರರಂತೆ, ವಯನಾಡಿನ ಜಿಲ್ಲಾಧಿಕಾರಿಯಂತೆ ಆಡುವುದನ್ನು ನಿಲ್ಲಿಸಿ. ಕೇರಳದ ನೆರೆಯಾದರೆ ಪರಿಹಾರ ಕೊಡುತ್ತೀರಿ, 100 ಮನೆ ಕಟ್ಟಿಕೊಡುತ್ತೀರಿ. ಆದರೆ ಉತ್ತರ ಕರ್ನಾಟಕದಲ್ಲಿ ನೆರೆ ಬಂದಿದೆ, ರೈತರು ಸಂಕಷ್ಟದಲ್ಲಿದ್ದಾರೆ. ಮನೆಗಳು ಕೊಚ್ಚಿ ಹೋಗಿವೆ, 12.5 ಲಕ್ಷ ಎಕರೆ ಬೆಳೆ ನಾಶವಾಗಿದೆ ಇದಕ್ಕೆ ಪರಿಹಾರ ಯಾವಾಗ ಕೊಡುತ್ತೀರಿ? ನಕಲಿ ಗಾಂಧಿ ಕುಟುಂಬಕ್ಕೆ ತಲೆಬಾಗಿಕೊಂಡು ನಮ್ಮ ಜನರ ತೆರಿಗೆ ದುಡ್ಡನ್ನು ಹೈಕಮಾಂಡ್ ನವರಿಗೆ ಎಟಿಎಂನಂತೆ ಕೊಡುವುದನ್ನು ನಿಲ್ಲಿಸಿ. ನಿಮ್ಮನ್ನು ಕರ್ನಾಟಕದ ಸಿಎಂ ಆಗಿ ಆಯ್ಕೆ ಮಾಡಲಾಗಿದೆಯೇ ಹೊರತು ದೆಹಲಿ ನಾಯಕ ಕೈಗೊಂಬೆಯಾಗಿ ಅಲ್ಲ ಎಂಬುದನ್ನು ಮರೆಯಬೇಡಿ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments