Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯಗೆ ಆಗುತ್ತಿರುವ ಮೋಸದ ಬಗ್ಗೆ ಮಾತನಾಡಿದ ಆರ್‌.ಅಶೋಕ್

ಸಿದ್ದರಾಮಯ್ಯಗೆ ಆಗುತ್ತಿರುವ ಮೋಸದ ಬಗ್ಗೆ ಮಾತನಾಡಿದ ಆರ್‌.ಅಶೋಕ್

Sampriya

ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2024 (17:50 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರಿಗೆ ಅವರ ಪಕ್ಷದವರೇ ಮೋಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಇಂದು ಮಾಧ್ಯಮದವರ ಜತೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ನಾವ್ಯಾರೂ ಆರ್‌ಟಿಐ ಅರ್ಜಿ ಹಾಕಿಲ್ಲ, ಅವರ ಪಕ್ಷದವರೇ ಎಲ್ಲ ದಾಖಲೆಗಳನ್ನು ಹೊರ ತೆಗೆದಿದ್ದಾರೆ.  ಮ್ಯೂಸಿಕಲ್‌ ಚೇರ್‌ ಮಾಡುತ್ತಿರುವವರು ಪಟಾಕಿ ಇಡುತ್ತಿದ್ದಾರೆ. ಅವರು ಪಟಾಕಿ ಹೊಡೆದಾಗ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದು ವ್ಯಂಗ್ಯವಾಗಿ ಹೇಳಿದರು.

ಇನ್ನೂ ರಾಜ್ಯದಲ್ಲಿ 60 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಕ್ಯಾನ್ಸಲ್ ಮಾಡಲು ತಯಾರಿ ನಡೆಯುತ್ತಿದೆ. ಈ ಮೂಲಕ ಸರ್ಕಾರ ಹಣ ಉಳಿತಾಯಕ್ಕೆ ಮುಂದಾಗಿಸೆ. ಈಗಾಗಲೇ ಬಿ‍ಪಿಎಲ್‌ ಕಾರ್ಡ್‌ದಾರರಿಗೆ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ.

ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಿ, ಆ ಮೂಲಕ ಕಾರ್ಡ್‌ ರದ್ದುಪಡಿಸಿ ಗ್ಯಾರಂಟಿಗೆ ಹಣ ಉಳಿಸಲಾಗುತ್ತಿದೆ. ಜನರಿಗೆ ಗೊತ್ತಾಗದಂತೆ ತೆರಿಗೆ ವಿಧಿಸುವುದು ಹೇಗೆಂದು ತಂತ್ರ ಮಾಡಲು ಸಮಿತಿ ನೇಮಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದರು.

ಇಂತಹ ಗ್ಯಾರಂಟಿ ಯೋಜನೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ದುಸ್ಥಿತಿಗೆ ತಲುಪಿದೆ. ಕರ್ನಾಟಕ ಪಾಪರ್‌ ಆದರೂ ಪರವಾಗಿಲ್ಲ. ನಮ್ಮ ಬೇಳೆ ಬೇಯಬೇಕು ಎಂದು ಕಾಂಗ್ರೆಸ್ ಯೋಚಿಸಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ತುಂಗಭದ್ರಾ ಅಣೆಕಟ್ಟೆ ಗೇಟು ಮುರಿತ: ಕಾರಣ ಪತ್ತೆಗೆ ತಜ್ಞರ ತಂಡ ಆಗಮನ