Select Your Language

Notifications

webdunia
webdunia
webdunia
webdunia

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

R Ashok

Krishnaveni K

ಬೆಂಗಳೂರು , ಮಂಗಳವಾರ, 26 ಆಗಸ್ಟ್ 2025 (15:29 IST)

ಬೆಂಗಳೂರು: ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿರುವ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಭಾರತಾಂಬೆಗೆ ನಮಿಸಿದ್ದಕ್ಕೆ ಕ್ಷಮೆ ಯಾಚಿಸಬೇಕೇ ಎಂದಿದ್ದಾರೆ.

ಆರ್ ಎಸ್ಎಸ್ ಗೀತೆ ನಮಸ್ತೇ ಸದಾ ವತ್ಸಲೇ ನಿಜವಾಗಿ ಭಾರತಾಂಬೆಯನ್ನು ಕುರಿತಾದ ಹಾಡು. ಆದರೆ ಈ ಹಾಡು ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ಅವರೀಗ ಕ್ಷಮೆ ಯಾಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್ ‘ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ?

 

ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. "ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು." ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ?

ಒಂದು ಕಡೆ ವಿಧಾನಸೌಧದಲ್ಲಿ "ಪಾಕಿಸ್ತಾನ ಜಿಂದಾಬಾದ್" ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ?

ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ?

 

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು.

"He who loves not his country can love nothing". ಅಂದರೆ "ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ" ಎನ್ನುವ ಮಾತಿದೆ.

 

ಆದರೆ ಕಾಂಗ್ರೆಸ್ ಪಕ್ಷದಲ್ಲಿ "ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು" ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌