Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯನ ವಿರುದ್ಧವೇ ಕಾಂಗ್ರೆಸ್ ಮತಗಳ್ಳತನ ಮಾಡಿತ್ತು: ಅಂಕಿ ಅಂಶ ನೀಡಿದ ಆರ್ ಅಶೋಕ್

R Ashok

Krishnaveni K

ಬೆಂಗಳೂರು , ಶುಕ್ರವಾರ, 29 ಆಗಸ್ಟ್ 2025 (13:18 IST)
ಬೆಂಗಳೂರು: ಬಿಜೆಪಿ ಮತ್ತು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡುತ್ತಿರುವ ಕಾಂಗ್ರೆಸ್ ಗೆ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್ ಮತಗಳ್ಳತನ ಮಾಡಿ ಮೋಸ ಮಾಡಿತ್ತು ಎಂದು ಅಂಕಿ ಅಂಶ ನೀಡಿದ್ದಾರೆ.
 

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ 1991 ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಮೋಸದಿಂದ ಸೋಲಿಸಿದರು ಎಂದಿದ್ದರು. ಅವರ ಇದೇ ಹೇಳಿಕೆಯನ್ನು ಉಲ್ಲೇಖಿಸಿ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. 1991 ರಲ್ಲಿ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದರು. ಅವತ್ತು ಅವರು ಕೊಪ್ಪಳದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು. ಅಂದು ಅವರನ್ನು ಮೋಸದಿಂದ ಸೋಲಿಸಿದ್ದು ಕಾಂಗ್ರೆಸ್ ಪಕ್ಷ ಎಂದಿದ್ದಾರೆ.

‘ಮತಗಳ್ಳತನ"ದ ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆಎನ್ ರಾಜಣ್ಣ ಅವರನ್ನು ಅತ್ಯಂತ ಅಗೌರವವಾಗಿ ಸಂಪುಟದಿಂದ ವಜಾ ಮಾಡಿದ್ದ ರಾಹುಲ್ ಗಾಂಧಿ ಅವರಿಗೆ, ಈಗ ಕಾಂಗ್ರೆಸ್ ಪಕ್ಷದ ಮೋಸವನ್ನು ಬಯಲು ಮಾಡಿರುವ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ? ಅಥವಾ ಕಾಂಗ್ರೆಸ್ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತನಾ?

2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಮತ ಖರೀದಿ ಮೂಲಕ ಗೆದ್ದರು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಈಗಾಗಲೇ ಬಯಲು ಮಾಡಿದ್ದಾರೆ.

ಪಂಚಾಯಿತಿ ಇಂದ ಪಾರ್ಲಿಮೆಂಟ್ ವರೆಗೆ ಕಾಂಗ್ರೆಸ್ ಪಕ್ಷದ ಏಕಚಕ್ರಾಧಿಪತ್ಯ ಇದ್ದ ಕಾಲದಲ್ಲಿ, "ಆಗೆಲ್ಲಾ ಇವಿಎಂ ಇರಲಿಲ್ಲ, ಒಬ್ರೋ ಇಬ್ರೋ ಕೂತ್ಕೊಂಡು ಒತ್ತು ಬುಡ್ರೋ ಅನ್ನೋರು" ಎಂದು ಕಾಂಗ್ರೆಸ್ ಪಕ್ಷ 60 ವರ್ಷ ಹೇಗೆ ಚುನಾವಣೆ ಗೆಲ್ಲುತ್ತಿತ್ತು ಎನ್ನುವುದನ್ನ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಲೀಲಾಜಾಲವಾಗಿ ವಿವರಿಸಿದ್ದಾರೆ.

ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮದ ಪಿತಾಮಹ ಯಾರಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ನೆಹರೂ-ಗಾಂಧಿ ಕುಟುಂಬ. ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅವರು ಮಾತನಾಡಿದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಸೆಪ್ಟೆಂಬರ್ ನಲ್ಲಿ ಮಳೆ ಬಗ್ಗೆ ಈ ಎಚ್ಚರಿಕೆ ತಪ್ಪದೇ ಗಮನಿಸಿ