Select Your Language

Notifications

webdunia
webdunia
webdunia
webdunia

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

R Ashok

Krishnaveni K

ಬೆಂಗಳೂರು , ಶುಕ್ರವಾರ, 5 ಸೆಪ್ಟಂಬರ್ 2025 (13:23 IST)
ಬೆಂಗಳೂರು: ರೈತರ ಬಗ್ಗೆ ಮಾತನಾಡುವಾಗ ಮೈಮೇಲೆ ಎಚ್ಚರ ಇಟ್ಟುಕೊಂಡು ಮಾತನಾಡಬೆಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಗೆ ವಿಪಕ್ಷ ನಾಯಕ ಆರ್ ಅಶೋಕ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ನೀವು ಧಿಕ್ಕಾರ ಕೂಗುವುದು ಬಿಟ್ಟು ಏನೂ ಮಾಡಕ್ಕಾಗಲ್ಲ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದರು. ಇದರ ಬಗ್ಗೆ ಅಶೋಕ್ ಪ್ರತಿಕ್ರಿಯಿಸಿದ್ದಾರೆ. ‘ನಿನ್ನೆ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ ಡಿಸಿಎಂ ಡಿಕೆ ಶಿವಕುಮಾರ್  ಅವರೇ, ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ "ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ." ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ.

ಈಗ "ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ" ಎಂದು ರೈತರ ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ.

ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು, ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ ಅಲ್ಲ ಶಿವಕುಮಾರ್ ಅವರೇ.

ಕೈಗಾರಿಕೆಗಳಿಗೆ, ರೈಲು, ರಸ್ತೆ, ವಿಮಾನ ನಿಲ್ದಾಣಕ್ಕೆ ಈ ಹಿಂದೆಯೂ ರೈತರ ಬಳಿ ಜಮೀನು ಪಡೆಯಲಾಗಿದೆ. ಹೆಚ್ ಎಂಟಿ ಕಾರ್ಖಾನೆ ಬಂದಾಗ ಸ್ವತಃ ನಮ್ಮ ಕುಟುಂಬ ಕೂಡ ಜಮೀನು ನೀಡಿತ್ತು. ಆದರೆ ತಮ್ಮ ಜೀವನದ ಆಧಾರ ಸ್ತಂಭವಾಗಿರುವ ಜಮೀನನ್ನು ಕಳೆದುಕೊಳ್ಳುತ್ತಿರುವ ರೈತರ ಬಳಿ ಹೇಗೆ ಮಾತನಾಡಬೇಕು, ಯಾವ ರೀತಿ ಸಂವೇದನೆಯಿಂದ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದ ತಮ್ಮಂತಹವರು ಮುಂದೊಂದು ದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವುದು ನಮ್ಮ ನಾಡಿನ ದುರಂತ.

ರೈತರ ಕಷ್ಟ, ಕೃಷಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗೊತ್ತಿರುವ ನಿಜವಾದ ಒಕ್ಕಲಿಗ ಅನ್ನದಾತರ ಬಗ್ಗೆ ಈ ರೀತಿಯ ದರ್ಪದ ಮಾತುಗಳನ್ನು ಎಂದಿಗೂ ಆಡುವುದಿಲ್ಲ. ಒಕ್ಕಲಿಕೆಯನ್ನು, ಮಣ್ಣಿನ ಮಕ್ಕಳನ್ನು ಅಪಮಾನ ಮಾಡುತ್ತಿರುವ ತಮ್ಮ ಈ ದುರ್ನಡತೆಯ ಪರಿಣಾಮ ಮುಂದೆ ಗೊತ್ತಾಗಲಿದೆ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ