Select Your Language

Notifications

webdunia
webdunia
webdunia
webdunia

ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಳ್ತಿದ್ದಾರೆ: ಆರ್ ಅಶೋಕ ವಾಗ್ದಾಳಿ

R Ashok

Krishnaveni K

ಬೆಂಗಳೂರು , ಬುಧವಾರ, 30 ಜುಲೈ 2025 (11:49 IST)
ಬೆಂಗಳೂರು: ಮಹದೇವ ಪುರ ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ  ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ  ಹಮ್ಮಿಕೊಂಡಿದೆ. ಇದರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಆರ್ ಅಶೋಕ್ ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಂಡಂತೆ ಎಂದು ಟೀಕಿಸಿದ್ದಾರೆ.

'ಕೈ'ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ! ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ.

ರಾಹುಲ್ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ?

-ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ?
-ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ
-ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ
-ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ
-ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ
ಈಗ ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ ತಮ್ಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ anticipatory bail ತೆಗೆದುಕೊಳ್ಳೋಕೆ ಬರುತ್ತಿದ್ದೀರಲ್ಲ, ನಿಮ್ಮ ಕಾಂಗ್ರೆಸ್ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ನಾಕಾಣೆ ಎಂದು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ