Publish Date: Mon, 24 Apr 2023 (18:30 IST)
Updated Date: Mon, 24 Apr 2023 (18:24 IST)
ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಇಂದು ಬೆಳಗಾವಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ರಾಮದುರ್ಗದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಎಂ. ಪಣ್ಣಣ ಪರ ಮತಬೇಟೆ ಮಾಡಲಿದ್ದಾರೆ. ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಜಿಲ್ಲೆಯ 50 ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸೋಕೆ ರಣತಂತ್ರವನ್ನು ಮಾಡುತ್ತಿದೆ. ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ.