ಅ.6, 7ಕ್ಕೆ ರಾಹುಲ್ ಗಾಂಧಿ ರಾಜ್ಯ ಪ್ರವಾಸ: ಅಧಿಕೃತ ಮಾಹಿತಿ

Webdunia
ಗುರುವಾರ, 24 ಸೆಪ್ಟಂಬರ್ 2015 (11:32 IST)
ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಕೊನೆಗೂ ಅವರ ಕಚೇರಿಯ ಮೂಲಗಳು ಅಧಿಕೃತ ಹೇಳಿಕೆ ಹೊರಹಾಕಿದ್ದು, ರಾಹುಲ್ ಅ.6 ಮತ್ತು 7ರಂದು ರಾಜ್ಯಕ್ಕೆ ಭೇಟಿ ನೀಡುವುದಾಗಿ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಲಾಗಿದೆ. 
 
ಇಂದು ಮಾಡಲಾಗಿರುವ ಟ್ವೀಟ್‌ನಲ್ಲಿ, ರಾಜ್ಯದಲ್ಲಿ ಹೆಚ್ಚು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆ ಮಂಡ್ಯಗೆ ಮೊದಲು ಭೇಟಿ ನೀಡಿ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದು, ಈ ವೇಳೆ ರೈತರ ಸಮಸ್ಯೆ ಬಗ್ಗೆ ಚರ್ಚಿಸಲಿದ್ದಾರೆ. ಬಳಿಕ ಹಾವೇರಿ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಸಿ ಬೆಂಗಳೂರಿನ ಕರ್ನಾಟಕ ಕಾಂಗ್ರೆಸ್ ಪ್ರಾದೇಶಿಕ ಪಕ್ಷದ ಕಚೇರಿಯಲ್ಲಿ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಲಾಗಿದೆ. 
 
ಇನ್ನು ಈ ಹಿಂದೆಯೂ ಕೂಡ ರಾಜ್ಯದ ನಾಯಕರು ಈ ಬಗ್ಗೆ ಸ್ಪಷ್ಟಪಡಿಸಿದ್ದರು. ಆದರೆ ರಾಹುಲ್ ಗಾಂಧಿ ಅವರಿಂದ ಅಧಿಕೃತ ಹೇಳಿಕೆ ಹೊರಬಿದ್ದಿರಲಿಲ್ಲ. ಕೊನೆಗೂ ರಾಹುಲ್ ಗಾಂಧಿ ಅವರೇ ಇಂದು ಅಧಿಕೃತ ಹೇಳಿಕೆ ನೀಡುವ ಮೂಲಕ ರಾಜ್ಯ ಪ್ರವಾಸವನ್ನು ಖಚಿತಪಡಿಸಿದ್ದಾರೆ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

Show comments