ಬೆಂಗಳೂರು: ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ. ಆದರೆ ಸ್ಪರ್ಧಿಯಾಗಿ ಅಲ್ಲ. ರಾಯಭಾರಿಯಾಗಿ ದ್ರಾವಿಡ್ ರನ್ನು ಚುನಾವಣಾ ಆಯೋಗ ನೇಮಿಸಿದೆ.
ನವದೆಹಲಿಯಲ್ಲಿ ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಒಪಿ ರಾವತ್ ಮಾಹಿತಿ ನೀಡಿದ್ದಾರೆ. ಕರ್ನಾಟಕದವರೇ ಆದ ರಾಹುಲ್ ದ್ರಾವಿಡ್ ಇಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಾಗಿ ಅವರಿಂದ ಮತದಾನದ ಬಗ್ಗೆ ಆಯೋಗ ಪ್ರಚಾರ ನಡೆಸಲಿದೆ.
ಈ ಬಗ್ಗೆ ಹಿಂದೆಯೇ ಮಾಧ್ಯಮಗಳಲ್ಲಿ ವರದಿಗಳು ಬಂದಿತ್ತು. ದ್ರಾವಿಡ್ ರನ್ನು ಚುನಾವಣಾ ರಾಯಭಾರಿಯಾಗಿ ಚುನಾವಣಾ ಆಯೋಗ ನೇಮಿಸುವ ಸಾಧ್ಯತೆಯಿದೆ ಎಂದು ಹಿಂದೆಯೇ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅದೀಗ ನಿಜವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ