Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಬಂಧನ ನಾಚಿಕೆಗೇಡು: ಜಿ.ಪರಮೇಶ್ವರ್

ರಾಹುಲ್ ಗಾಂಧಿ ಬಂಧನ ನಾಚಿಕೆಗೇಡು: ಜಿ.ಪರಮೇಶ್ವರ್
ಬೆಂಗಳೂರು , ಶುಕ್ರವಾರ, 9 ಜೂನ್ 2017 (12:30 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬಂಧನ ನಾಚಿಕೆಗೇಡು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗುಡುಗಿದ್ದಾರೆ.
 
ರಾಷ್ಟ್ರೀಯ ನಾಯಕರೊಬ್ಬರನ್ನು ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ತೀವ್ರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮಧ್ಯಪ್ರದೇಶದ ಮೌಂಡ್ಸರ್ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿರುವುದನ್ನು ವಿರೋಧಿಸಿ ರಾಹುಲ್ ಗಾಂಧಿ ಮಧ್ಯಪ್ರದೇಶಕ್ಕೆ ತೆರಳಿದಾಗ ಪೊಲೀಸರು ಅವರನ್ನು ಬಂಧಿಸಿದ್ದರು.
 
ರಾಹುಲ್ ಗಾಂಧಿ ಮೌಂಡ್ಸರ್ ಜಿಲ್ಲೆಗೆ ಭೇಟಿ ನೀಡಿದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಎನ್ನುವ ಆತಂಕದಿಂದ ಬಂಧಿಸಲಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.   

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ಲಾಸ್ಟಿಕ್ ಆಹಾರ ಎನ್ನುವುದೆಲ್ಲಾ ಸುಳ್ಳು: ಸಚಿವ ಯುಟಿ ಖಾದರ್