Publish Date: Thu, 16 Jun 2022 (20:50 IST)
Updated Date: Thu, 16 Jun 2022 (20:53 IST)
ತಾಯಿ ಸೋನಿಯಾ ಗಾಂಧಿ ಆಸ್ಪತ್ರೆಯಲ್ಲಿ ಇರುವುದರಿಂದ ಜುಲೈ 20ರವರೆಗೆ ವಿಚಾರಣೆಯಿಂದ ವಿನಾಯಿತಿ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಸುಮಾರು 40 ಗಂಟೆಗಳ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿ ೩ ದಿನ ಸಮಯವಕಾಶ ಕೇಳಿದ್ದಾರೆ.
ಇದೇ ವೇಳೆ ಇಡಿ ನ್ಯಾಷನಲ್ ಹೆರಾಲ್ಡ್ ಹಗರಣದ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೂಡ ನೋಟಿಸ್ ಜಾರಿ ಮಾಡಿದ್ದು, ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.