ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸಿನಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯಾಗಲು ಸಿದ್ದ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸಂಪೂರ್ಣ ದೇಶವೇ ಕಾಂಗ್ರೆಸ್ ಮುಕ್ತವಾಗುತ್ತಿರುವಾಗ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಯಾವ ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷ ಅಸ್ಥಿತ್ವದಲ್ಲಿ ಇರುವುದಿಲ್ಲ ಎಂದು ಗುಡುಗಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ಮುಕ್ತವಾಗಲಿದ್ದು, ಬಿಜೆಪಿ ಬಹುಮತಗಳಿಸಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.