Publish Date: Sat, 24 Feb 2018 (11:51 IST)
Updated Date: Sat, 24 Feb 2018 (11:53 IST)
ರಾಜ್ಯದಲ್ಲಿ ನಡೆದಿರುವ ಗೂಂಡಾಗಿರಿ ಪ್ರಕರಣಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ ನಲಪಾಡ್ ಜೈಲಿನಲ್ಲಿದ್ದುಕೊಂಡೂ ಹಲ್ಲೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆದಿರುವ ದೌರ್ಜನ್ಯಗಳ ಬಗ್ಗೆ ರಾಹುಲ್ ಗಾಂಧಿ ಮಾತನಾಡಬೇಕು ಎಂದಿದ್ದಾರೆ.
ಕಾಶಪ್ಪನವರ ಹಾಗೂ ಸಚಿವ ವಿನಯ ಕುಲಕರ್ಣಿ ಅವರ ಪ್ರಕರಣದಿಂದ ರಾಜ್ಯದಲ್ಲಿ ಏನೂ ಬೇಕಾದರೂ ಮಾಡಬಹುದು ಎಂಬ ಪ್ರವೃತ್ತಿ ಬೆಳೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.