Publish Date: Tue, 09 Jan 2018 (10:59 IST)
Updated Date: Tue, 09 Jan 2018 (11:01 IST)
ಬೆಂಗಳೂರು: ಬಹರೈನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಸಿಎಂ ಸಿದ್ದರಾಮಯ್ಯರನ್ನು ಅಲ್ಲಿನ ಭಾರತೀಯರ ಮುಂದೆ ಹೊಗಳಿದ್ದಾರೆ.
ಕರ್ನಾಟಕದಲ್ಲಿ ನಮಗೆ ಪ್ರಬಲ ನಾಯಕ ಇದ್ದಾರೆ. ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಕರ್ನಾಟಕದ ನಾಯಕರ ಮೇಲೆ ವಿಶ್ವಾಸವಿದೆ ಎಂದು ರಾಹುಲ್ ಗಾಂಧಿ ಸಿದ್ದರಾಮಯ್ಯ ನಾಯಕತ್ವಕ್ಕೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.
ಬಹರೈನ್ ನಲ್ಲಿ ಅನಿವಾಸಿ ಭಾರತೀಯರ ಜತೆಗೆ ಸಂವಾದ ನಡೆಸಿದ ರಾಹುಲ್ ಗಾಂಧಿ ಕರ್ನಾಟಕ ಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ರಾಹುಲ್ ವಿದೇಶ ಪ್ರವಾಸ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ