ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕದನದ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಮಹತ್ವದ ಜವಾಬ್ಧಾರಿಯೊಂದನ್ನು ಕೊಟ್ಟಿದ್ದಾರೆ.
ಒಂದೆಡೆ ಹೊಸ ವರ್ಷದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬಹುದೇ ಎಂದು ಜನರು ಕುತೂಹಲದಿಂದ ನೋಡುತ್ತಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಬೆಂಬಲಿಗರು ಹೇಗಾದರೂ ತಮ್ಮ ನಾಯಕನನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆ.
ಆದರೆ ಎಲ್ಲಾ ನಿರ್ಧಾರವೂ ಹೈಕಮಾಂಡ್ ಕೈಯಲ್ಲಿದೆ. ಹೈಕಮಾಂಡ್ ಹೇಳಿದರೆ ಮಾತ್ರ ಬದಲಾವಣೆಯಾಗಲಿದೆ.
ಇದರ ನಡುವೆ ರಾಹುಲ್ ಗಾಂಧಿ ವಿದೇಶದಿಂದ ಬಂದ ಮೇಲೆ ನಿರ್ಧಾರವಾಗಲಿದೆ ಎಂಬ ಸುದ್ದಿಗಳಿತ್ತು. ಆದರೆ ಇದರ ನಡುವೆ ಪಂಚ ರಾಜ್ಯಗಳ ಚುನಾವಣೆ ಬರುತ್ತಿದ್ದು ಸದ್ಯಕ್ಕೆ ಸಿಎಂ ಬದಲಾವಣೆ ವಿಚಾರಕ್ಕೆ ಬ್ರೇಕ್ ಬೀಳುವ ಸಾಧ್ಯತೆಯಿದೆ.
ಇದರ ನಡುವೆ ಡಿಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ಮಹತ್ವದ ಜವಾಬ್ಧಾರಿಯೊಂದನ್ನು ನೀಡಿದ್ದಾರೆ. ಅಸ್ಸಾಂ ಚುನಾವಣೆಯ ಹಿರಿಯ ವೀಕ್ಷಕರಾಗಿ ಡಿಕೆಶಿಯವರನ್ನು ನೇಮಿಸಲಾಗಿದೆ. ಇಲ್ಲಿ ಪ್ರಿಯಾಂಕ ಗಾಂಧಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದಾರೆ. ಇದೀಗ ಪ್ರಿಯಾಂಕ ಗಾಂಧಿ ಸೂಚನೆಯ ಮೇರೆಗೇ ಡಿಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ಈ ಜವಾಬ್ಧಾರಿ ಕೊಟ್ಟಿದ್ದಾರೆ ಎನ್ನಲಾಗಿದೆ.