Daily Horoscope

Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನಕ್ಕೆ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ರಾಹುಲ್ ಗಾಂಧಿ ನಿರ್ಧಾರ

DK Shivakumar-Rahul Gandhi
ನವದೆಹಲಿ: ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಆಪ್ತರಾಗಿರುವ ಕಾರಣಕ್ಕೆ ನಮಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಕಾದಿದ್ದವರಿಗೆ ರಾಹುಲ್ ಗಾಂಧಿ ಶಾಕ್ ಕೊಟ್ಟಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗಾಗಿ ದೆಹಲಿಗೆ ತೆರಳುವ ಮುನ್ನ ಸಿದ್ದರಾಮಯ್ಯ ಜೊತೆಗೆ ಚರ್ಚೆ ನಡೆಸಿದ್ದ ಸಿಎಂ ಡಿಕೆ ಶಿವಕುಮಾರ್ ತಮ್ಮದೇ ಪಟ್ಟಿ ಸಿದ್ಧಪಡಿಸಿದ್ದರು. ಆದರೆ ಇದನ್ನು ಹೈಕಮಾಂಡ್ ಮುಂದಿಟ್ಟಾಗ ಒಪ್ಪಿಕೊಂಡಿಲ್ಲ ಎನ್ನಲಾಗಿದೆ.

ರಾಜ್ಯದ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ಅಳೆದು ತೂಗಿ ಖುದ್ದಾಗಿ ತಾವೇ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಡಿಕೆ ಶಿವಕುಮಾರ್ ನೀಡಿರುವ ಪಟ್ಟಿಯನ್ನೂ ಇದೇ ಕಾರಣಕ್ಕೆ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಈ ಬಾರಿ ಹೆಚ್ಚು ಯುವ ಶಾಸಕರಿಗೆ ಅವಕಾಶ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿಲ್ಲ. ರಾಹುಲ್ ಗಾಂಧಿ ನೀಡಿರುವ ಪಟ್ಟಿ ಬಗ್ಗೆ ಖರ್ಗೆ ಜೊತೆ ಚರ್ಚೆ ನಡೆಸಿಯೇ ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಸಚಿವ ಸ್ಥಾನ ಯಾರಿಗೆ ಸಿಗಬಹುದು ಎಂಬುದು ರಾಜ್ಯ ನಾಯಕರ ಕೈಯಲ್ಲಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನಲ್ಲಿ ಹಾಡಹಗಲು ಸಾರ್ವಜನಿಕವಾಗಿ ಹುಡುಗಿಯನ್ನು ಕೊಂದ ಮಾಜಿ ಲವ್ವರ್: ಭೀಕರ ವಿಡಿಯೋ ವೈರಲ್ Video