Publish Date: Mon, 18 Sep 2017 (19:19 IST)
Updated Date: Mon, 18 Sep 2017 (20:39 IST)
ಪ್ರಧಾನಿ ನರೇಂದ್ರ ಮೋದಿಗೆ ಹಗಲು ಕನಸಿನಲ್ಲಿಯೂ ರಾಹುಲ್ ಗಾಂಧಿ ಪ್ರಧಾನಮಂತ್ರಿಯಾದಂತೆ ಕಾಣುತ್ತಾರೆ. ಅದಕ್ಕೆ ರಾಹುಲ್ ಅಂದರೆ, ಮೋದಿಯವರಿಗೆ ಭಯವಾಗುತ್ತದೆ ಎಂದು ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಗುಜರಾತ್ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳ ಬಳಿಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಮುಂಬರುವು ಡಿಸೆಂಬರ್ ತಿಂಗಳಲ್ಲಿ ಮತ್ತು ಮುಂದಿನ ವರ್ಷದ ಆರಂಭದಲ್ಲಿ ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ. ಚುನಾವಣೆ ಫಲಿತಾಂಶದ ನಂತರ ರಾಹುಲ್ ಅಧ್ಯಕ್ಷ ಸ್ಥಾನಕ್ಕೆ ಏರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಚುನಾವಣೆ ನಂತರ ನಡೆಯಲಿರುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧಿಸಿ ಪಾರದರ್ಶಕವಾಗಿ ಆಯ್ಕೆಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಸಂಸದ ವೀರಪ್ಪ ಮೊಯ್ಲಿ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.