Publish Date: Sat, 23 Dec 2017 (10:13 IST)
Updated Date: Sat, 23 Dec 2017 (10:15 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮೇಲೆ ರಾಹುಲ್ ಗಾಂಧಿಗೆ ಮೊದಲ ಚುನಾವಣೆ ಕರ್ನಾಟಕ ವಿಧಾನಸಭೆ ಚುನಾವಣೆ. ಈ ಚುನಾವಣೆಯನ್ನು ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ರಾಹುಲ್ ಗಾಂಧಿ ಹೊಸ ಹೆಜ್ಜೆ ಇಡಲು ತೀರ್ಮಾನಿಸಿದ್ದಾರೆ.
ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಗಿಟ್ಟಿಸುವ ಮೂಲಕ ಪಕ್ಷಕ್ಕೆ ಅಂಟಿರುವ ಸೋಲಿನ ಹಣೆಪಟ್ಟಿ ಕಳಚಲು ರಾಹುಲ್ ಪಣ ತೊಟ್ಟಿದ್ದಾರೆ. ಅದಕ್ಕಾಗಿ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಜತೆ ಚುನಾವಣೆ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಈ ನಿಟ್ಟಿನಲ್ಲಿ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿಗೆ ಜನಪ್ರಿಯ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸಲು ರಾಹುಲ್ ಸೂಚಿಸಿದ್ದಾರೆ ಎನ್ನಲಾಗಿದೆ. ತಾವೇ ಖುದ್ದಾಗಿ ಕರ್ನಾಟಕದಾದ್ಯಂತ ಪ್ರವಾಸ ಮಾಡಿ ಪಕ್ಷದ ಸೋಲಿನ ಸರಪಳಿ ಕಳಚುವ ವಿಶ್ವಾಸದಲ್ಲಿ ರಾಹುಲ್ ಇದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ