Publish Date: Wed, 21 Mar 2018 (10:07 IST)
Updated Date: Wed, 21 Mar 2018 (10:10 IST)
ಮಂಗಳೂರು: ಕರಾವಳಿಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಿನ್ನೆ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಕೈ ನಾಯಕರೊಂದಿಗೆ ಅಲ್ಲಿಯೇ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ನಾಯಕರು ಆಗಮಿಸಿದ್ದಾರೆ.
ಚುನಾವಣೆಗೆ ನಡೆಸಬೇಕಾದ ಸಿದ್ಧತೆ ಬಗ್ಗೆ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಿಗೆ ಸಲಹೆ ಸೂಚನೆ ನೀಡಲು ಈ ಸಭೆ ಕರೆದಿದ್ದರು ಎನ್ನಲಾಗಿದೆ. ಕರಾವಳಿ ಭಾಗದಲ್ಲಿ ಪಕ್ಷ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ