Select Your Language

Notifications

webdunia
webdunia
webdunia
webdunia

ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ಬರ್ತಾರೆಂದು ಕಾದಿದ್ದೇ ಬಂತು: ಗೈರಾಗಲು ಕಾರಣವೇನು

Rahul Gandhi

Krishnaveni K

ಬೆಳಗಾವಿ , ಮಂಗಳವಾರ, 21 ಜನವರಿ 2025 (11:50 IST)
ಬೆಳಗಾವಿ: ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ಸಮಾವೇಶಕ್ಕೆ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಗೈರಾಗಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ?

ರಾಹುಲ್ ಗಾಂಧಿ ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಪಕ್ಷದ ನಾಯಕರಲ್ಲಿ ಒಂದು ರೀತಿಯ ಉತ್ಸಾಹವಿತ್ತು. ಈಗಾಗಲೇ ರಾಹುಲ್ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯವರಿಂದ ಹಿಡಿದು ಎಲ್ಲಾ ನಾಯಕರು ಕಾದು ಕುಳಿತಿದ್ದರು. ಇಂದು ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನೂ ರಾಹುಲ್ ಮಾಡಬೇಕಿತ್ತು.

ಆದರೆ ರಾಹುಲ್ ಗಾಂಧಿಗೆ ದಿಡೀರ್ ಅನಾರೋಗ್ಯ ಕಾಣಿಸಿಕೊಂಡಿದ್ದು ಈ ಕಾರಣಕ್ಕೆ ಅವರು ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ. ಇದು ಕಾಂಗ್ರೆಸ್ ನಾಯಕರಲ್ಲಿ ನಿರಾಸೆ ಮೂಡಿಸಿದೆ.

ಇಂದಿನ ಸಮಾವೇಶಕ್ಕಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೆಳಗಾವಿಯಲ್ಲಿ ಬೀಡುಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ಬ್ಯಾಂಕ್ ದರೋಡೆಕೋರರ ಖತರ್ನಾಕ್ ಪ್ಲ್ಯಾನ್ ಬಹಿರಂಗ