Webdunia - Bharat's app for daily news and videos

Install App

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

Sampriya
ಶುಕ್ರವಾರ, 8 ಆಗಸ್ಟ್ 2025 (16:34 IST)
Photo Credit X
ಶಿವಮೊಗ್ಗ: ಬಿಜೆಪಿ ಮೇಲೆ ಮತಗಳ್ಳತನದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್‍ಗೆ ಮತಗಳ್ಳತನದ ಹಿನ್ನೆಲೆ ಬಹಳ ಹಿಂದಿನಿಂದಲೂ ಇದೆ. ಅವರ ಅಜ್ಜಿಯೇ ಮತಗಳ್ಳತದಿಂದ ಗೆದ್ದಿದ್ದರು ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಈ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದೇಶದ ತುರ್ತು ಪರಿಸ್ಥಿತಿಗೂ ಮೊದಲೇ ಮತಗಳ್ಳತನ ನಡೆದಿದೆ. ರಾಯ್‍ಬರೇಲಿಯಲ್ಲಿ ರಾಜ್ ನಾರಾಯಣ್ ವಿರುದ್ಧ ನಡೆದ ಚುನಾವಣೆಯಲ್ಲಿ ಇಂದಿರಾ ಗಾಂಧಿ  ಅವರು ಮತಗಳ್ಳತನದಿಂದ ಗೆದ್ದಿದ್ದರು. ಈಗ ರಾಹುಲ್ ಅವರು ಪ್ರಚಾರಕ್ಕಾಗಿ ಮತಗಳ್ಳತನದ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ ತಿರುಗೇಟುಕೊಟ್ಟಿದ್ದಾರೆ. 

ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋಕೆ ನಾಚಿಕೆಯಾಗಬೇಕು. ಚುನಾವಣೆ ಬಳಿಕ ಇವರಿಗೆ ತಕ್ಷಣ ಆಕ್ಷೇಪ ಸಲ್ಲಿಸಲು ಅವಕಾಶವಿದ್ದಾಗ, ಬಿಎಲ್‍ಎಗಳು ಮತಗಟ್ಟೆಗಳಲ್ಲಿ ಏನು ಮಾಡುತ್ತಿದ್ದರು. 

ಮತಗಟ್ಟೆಗಳಲ್ಲಿ ಬಿಎಲ್‍ಎ ನೇಮಕಕ್ಕೆ ಚುನಾವಣಾ ಆಯೋಗ ಅವಕಾಶ ನೀಡಿದ್ದಾಗ ಯಾರೊಬ್ಬರು ತಕರಾರು ಎತ್ತಿಲ್ಲ. ಆಪಾದನೆ ನಂತರದಲ್ಲೂ ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಲು ಹೇಳಿದೆ. ಇವರು ಅಫಿಡವಿಟ್ ಸಲ್ಲಿಸಲು ಸಿದ್ಧರಿಲ್ಲ. ರಾಹುಲ್ ಗಾಂಧಿ ಮಾತುಗಳಲ್ಲಿ ಅವರಿಗೆಯೇ ನಂಬಿಕೆಯಿಲ್ಲ. ಜನರ ಕಿವಿಗೆ ಹೂ ಇಡುವ ಕೆಲಸ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments