Webdunia - Bharat's app for daily news and videos

Install App

ರಾಹುಲ್ ಗಾಂಧಿ ನಾಯಕತ್ವಕ್ಕೆ ಮಿತ್ರಪಕ್ಷಗಳಿಂದಲೇ ಅಪಸ್ವರ: ಯಡಿಯೂರಪ್ಪ ಲೇವಡಿ

Webdunia
ಶುಕ್ರವಾರ, 7 ಜುಲೈ 2017 (15:44 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವಕ್ಕೆ ಮಿತ್ರಪಕ್ಷಗಳಿಂದಲೇ ಅಪಸ್ವರ ಎದುರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.
 
ಜಿಲ್ಲೆಯ ಜಮಖಂಡಿ ತಾಲೂಕಿನ ಬನಹಟ್ಟಿ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವಕ್ಕೆ ಮಿತ್ರಪಕ್ಷಗಳಿಂದಲೇ ವಿರೋಧ ವ್ಯಕ್ತವಾಗಿದ್ದರಿಂದ ಬೇರೆ ನಾಯಕನಿಗಾಗಿ ಕಾಂಗ್ರೆಸ್ ಹುಡುಕಾಟ ನಡೆಸಿದೆ ಎಂದು ತಿಳಿಸಿದ್ದಾರೆ.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಖಚಿತವಾಗಿಯೂ ಅಧಿಕಾರಕ್ಕೆ ಬರುತ್ತದೆ. ರಾಜ್ಯದಾದ್ಯಂತ ಪ್ರವಾಸ ಮಾಡಿ ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿ ಚುನಾವಣೆಗಾಗಿ ಸಿದ್ದತೆ ನಡೆಸಲಾಗುತ್ತಿದೆ. ಪ್ರತಿಯೊಂದು ಕ್ಷೇತ್ರದಾದ್ಯಂತ 20 ಸಾವಿರ ಕಾರ್ಯಕರ್ತರು ಪಕ್ಷದ ಪರವಾಗಿ ಹಗಲಿರಳು ದುಡಿಯುತ್ತಿದ್ದಾರೆ ಎಂದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ದುರಾಡಳಿತ, ಭ್ರಷ್ಟಾಚಾರದಿಂದಾಗಿ ಜನತೆ ಬೇಸತ್ತಿದ್ದಾರೆ. ರಾಜ್ಯದಾದ್ಯಂತ ಜನತೆ ಬೀಕರ ಬರಗಾಲ ಎದುರಿಸುತ್ತಿದ್ದರೂ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು 
 
ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments