ರಾಹುಲ್ ಗಾಂಧಿಯಿಂದ 13ರಂದು ಗಡಿ ಜಿಲ್ಲೆಯಲ್ಲಿ ಲೋಕಸಭೆ ಪ್ರಚಾರ ಶುರು..!?

Webdunia
ಶನಿವಾರ, 4 ಆಗಸ್ಟ್ 2018 (16:08 IST)
ಆ.13ರಂದು ಕೋಟೆ ನಗರಿ ಬೀದರ್ ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಅಂದು ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಅಭಿನಂದನಾ ಸಮಾರಂಭವನ್ನ ಹಮ್ಮಿಕೊಳ್ಳಲಾಗಿದೆ.

ಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ಪಕ್ಷ ಕರ್ನಾಟಕ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬೀದರ್ ನಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ.

ಅದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ ಅನ್ನುತ್ತೆ ಕಾಂಗ್ರೆಸ್ ಮೂಲಗಳು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್ ಗೆ ಬಂದ ಸಂದರ್ಭದಲ್ಲಿ ಲೋಕಸಭೆ ಟಿಕೆಟ್ ಆಕಾಂಕ್ಷಿಗಳಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸ್ವರಾಜ್ ಜಾಬ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಆನಂದ ದೇವಪ್ಪಾ ಸೇರಿದಂತೆ ಸ್ಥಳೀಯ ನಾಯಕರು ಮನವಿ ಸಲ್ಲಿಸಲಿದ್ದಾರೆ. ಕರ್ನಾಟಕ ಲೋಕಸಭೆಯ 28 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷ ಅದಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 13ರಂದು ಬೀದರ್ ನಿಂದಲೆ ಚುನಾವಣೆ ಪ್ರಚಾರಕ್ಕೆ ನಾಂಧಿ ಹಾಡಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಧರ್ಮಪತ್ನಿ ಡಾ.ಗೀತಾ ಈಶ್ವರ ಖಂಡ್ರೆಯವರನ್ನ ಲೋಕಸಭೆ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಚರ್ಚೆ ನಡೆಯಲಿದೆ ಅನ್ನುತ್ತೆ ಕಾಂಗ್ರೆಸ್ ಮೂಲಗಳು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments