Publish Date: Mon, 30 Apr 2018 (08:41 IST)
Updated Date: Mon, 30 Apr 2018 (08:42 IST)
ನವದೆಹಲಿ: ಕಾಂಗ್ರೆಸ್ ಅಲ್ಲದೇ ಬೇರೆಯವರಿಂದ ರೈತರಿಗೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜನ ಆಕ್ರೋಶ ರ್ಯಾಲಿಯಲ್ಲಿ ಹೇಳಿದ್ದಾರೆ.
ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
‘ಪ್ರಧಾನಿ ಮೋದಿ ಹೇಳಿದ ಯಾವುದೇ ಭರವಸೆಗಳೂ ಇದುವರೆಗೆ ಈಡೇರಿಲ್ಲ. ರೈತರ ಸಾಲಮನ್ನಾ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಇದು ನಮ್ಮ ಯೋಜನೆಯೇ ಅಲ್ಲ ಅಂತಾರೆ. ಒಂದು ವೇಳೆ ದೇಶದ ರೈತರಿಗೆ ಉಳಿಗಾಲವಿದ್ದರೆ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ’ಎಂದು ರಾಹುಲ್ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.