Webdunia - Bharat's app for daily news and videos

Install App

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

Sampriya
ಶನಿವಾರ, 2 ಆಗಸ್ಟ್ 2025 (19:02 IST)
Photo Credit X
ಬೆಂಗಳೂರು: ಚುನಾವಣಾ ಅಕ್ರಮದ ಕುರಿತು ಮೊಸಳೆಕಣ್ಣೀರು ಹಾಕಲು ಆ.5ರಂದು ರಾಜ್ಯಕ್ಕೆ ಬರುತ್ತಿರುವ ರಾಹುಲ್ ಗಾಂಧಿಯವರು ಕಳೆದ 24 ತಿಂಗಳುಗಳಲ್ಲಿ ಕರ್ನಾಟಕದಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಾಗ ಯಾಕೆ ಇಲ್ಲಿಗೆ ಬಂದಿಲ್ಲ ಎಂದು ಸಂಸದ ಪಿ.ಸಿ. ಮೋಹನ್ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಕೊಟ್ಟು, ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು ಮೃತಪಟ್ಟಾಗ ತಾವು ಯಾಕೆ ಕರ್ನಾಟಕಕ್ಕೆ ಬಂದಿಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಮೈಕ್ರೋ ಫೈನಾನ್ಸ್ ಕಿರುಕುಳದಿಂದ 50ಕ್ಕೂ ಹೆಚ್ಚು ಜನರು ಸಾವಿಗೀಡಾದಾಗ, ಆತ್ಮಹತ್ಯೆ ಮಾಡಿಕೊಂಡಾಗ ತಾವು ಯಾಕೆ ಬರಲಿಲ್ಲ? ಆರ್‍ಸಿಬಿ ಗೆಲುವಿನ ವಿಜಯೋತ್ಸವದ ಸಂದರ್ಭದಲ್ಲಿ 11 ಜನರು ಸಾವಿಗೀಡಾದಾಗ ರಾಹುಲ್ ಅವರು ಯಾಕೆ ಕರ್ನಾಟಕಕ್ಕೆ ಬರಲಿಲ್ಲ? ಎಂದು ಕೇಳಿದರು.

ಬಿಹಾರ ಚುನಾವಣೆ ಇನ್ನು ಕೆಲವೇ ತಿಂಗಳಲ್ಲಿ ಬರಲಿದೆ. ಸೋಲು ಕಟ್ಟಿಟ್ಟ ಬುತ್ತಿ ಎಂಬುದು ಗೊತ್ತಾಗಿ ನಾಟಕ ಮಾಡಲು ಬರುತ್ತಿದ್ದಾರೆ. ಕಾಂಗ್ರೆಸ್ ಗೆದ್ದಾಗ ಪ್ರಜಾಪ್ರಭುತ್ವದ ಗೆಲುವು ಎನ್ನುತ್ತಾರೆ. ಕಾಂಗ್ರೆಸ್ ಸೋತಿದ್ದರೆ ಇವಿಎಂ ಮೇಲೆ ಅಥವಾ ಬೇರೆ ಯಾರ ಮೇಲೋ ಆರೋಪಿಸುವುದು ತಮಗೆ ತಿಳಿದಿದೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಮತ್ತು ಪಕ್ಷದ ಪ್ರಮುಖರು ಇದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments