Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಮೋದಿ ವಿರುದ್ಧ ಮುಗಿಬಿದ್ದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ

Congress

Krishnaveni K

ಮಂಡ್ಯ , ಬುಧವಾರ, 17 ಏಪ್ರಿಲ್ 2024 (16:16 IST)
ಮಂಡ್ಯ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿತ್ತು. ಸಮಾವೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಕ್ಪ್ರಹಾರ ನಡೆಸಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಆದರೆ ಮೋದಿ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಝೋಡೋ ಯಾತ್ರೆ ವೇಳೆ ರೈತರ ಸಂಕಷ್ಟಗಳನ್ನು ಕಣ‍್ಣಾರೆ ಕಂಡಿದ್ದೇನೆ ಎಂದರು.

ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಉದ್ಯಮಿಗಳ ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲ ಮನ್ನಾ ಮಾಡಿಲ್ಲ. ಬೆಳೆ ವಿಮೆ ಯೋಜನೆಯಲ್ಲೂ ರೈತರಿಗೆ ಅನ್ಯಾಯವಾಗಿದೆ ಎಂದರು. ಈ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿಗಳ ಬಗ್ಗೆಯೂ ವಿವರಣೆ ನೀಡಿದರು.

ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಕೂಡಾ ಸಮಾವೇಶದಲ್ಲಿ ಗುಡುಗಿದ್ದಾರೆ. ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.
 
ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದರು. 
 
ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟವಾಗಿ ನುಡಿದರು. 
 
ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ, ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂಥಾ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ ಎಂದರು. 
 
ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡ ಕೊಡದಂತೆ ಮೋದಿಯವರ ಕೇಂದ್ರ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜೊತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ ಎಂದರು. 
 
ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿ ಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಲ್ಲಿ ಬಿಜೆಪಿಯಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಕ್ಕೂ ಧ್ವನಿ ಎತ್ತದೆ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಮಂಡ್ಯ ಜನತೆಯ ಸ್ವಾಭಿಮಾನಿ ತಾಕತ್ತನ್ನು ತೋರಿಸಿ ಎಂದು ಕರೆ ನೀಡಿದರು. 
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಲ್ಲಿ ನನಗೂ, ಮಗನಿಗೂ ಭವಿಷ್ಯವಿಲ್ಲದ್ದಕ್ಕೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದೆ: ಈಶ್ವರಪ್ಪ