ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಮೊದಲಿಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ರಾಹುಲ್ ಗಾಂಧಿ, ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯ ದರ್ಶನ ಪಡೆಯಲಿದ್ದಾರೆ.
ಬೆಂಗಳೂರಿನ ವಿಮಾಣ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಅವರನ್ನ ಡಿ.ಕೆ.ಶಿಕುಮಾರ್ ಮತ್ತು ಸಿದ್ದರಾಮಯ್ಯ ಸ್ವಾಗತಿಸಿದರು. ತುಮಕೂರಿಗೆ ಪ್ರಯಾಣ ಬೆಳಸಿದ ಬಳಿಕ ಬೆಂಗಳೂರಿಗೆ ಹಿಂದಿರುಗಿ ಬಿಬಿಎಂಪಿ ಚುನಾವಣೆ ಸಂಬಂಧ ಪ್ರಮುಖ ನಾಯಕರು, ಬೆಂಗಳೂರು ಭಾಗದ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಏ.1ರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ, ಅಂದು ಮಧ್ಯಾಹ್ನ 2ರಿಂದ 3.20ರವರೆಗೆ ಮುಂಚೂಣಿ ಘಟಕದೊಂದಿಗೆ ಸಮಾಲೋಚನೆ, ಪ್ರತ್ಯೇಕವಾಗಿ ವಿವಿಧ ಘಟಕಗಳ ಜವಾಬ್ದಾರಿ ವಿವರಣೆ ಪಡೆಯಲಿದ್ದಾರೆ. ಇದಿಷ್ಟು ಪೂರ್ವ ನಿಗದಿತ ಕಾರ್ಯಕ್ರಮ.
ಇದನ್ನು ಹೊರತುಪಡಿಸಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷರ ಜತೆ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಏ.1ರ ಮಧ್ಯಾಹ್ನ 3.30ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.