Select Your Language

Notifications

webdunia
webdunia
webdunia
webdunia

ನಾಳೆ ಖುದ್ದು ವಿಚಾರಣೆಗೆ ಹಾಜರಾಗಲು ರಾಹುಲ್‌ ಗಾಂಧಿ ಬೆಂಗಳೂರಿಗೆ

RahulGandhi

sampriya

, ಗುರುವಾರ, 6 ಜೂನ್ 2024 (20:24 IST)
ಬೆಂಗಳೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

2023ರಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಈ ಸಂಬಂಧ ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ನಾಳೆ ಬೆಂಗಳೂರಿಗೆ ಆಗಮಿಸಿ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆ ಸಂಬಂಧ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಬಿಜೆಪಿ ತನ್ನ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನ ನಿಲ್ದಾಣದಲ್ಲಿ ನಟಿ, ನೂತನ ಸಂಸದೆ ಕಂಗನಾ ರನೌತ್‌ಗೆ ಕಪಾಳಮೋಕ್ಷ