Publish Date: Fri, 05 Jun 2026 (09:31 IST)
Updated Date: Fri, 05 Jun 2026 (09:33 IST)
ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಮತ್ತೆ ಬೆಂಗಳೂರಿಗೆ ಬರುತ್ತಿದ್ದಾರೆ. ಮತ್ತೆ ಬೆಂಗಳೂರಿಗೆ ಯಾಕೆ ಬರುತ್ತಿದ್ದಾರೆ ಇಲ್ಲಿದೆ ಕಾರಣ.
ಜೂನ್ 3 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದರು. ದೆಹಲಿಯಲ್ಲಿ ಕರ್ನಾಟಕದ ನಾಯಕರೊಂದಿಗೆ ಸತತ ಚರ್ಚೆ ಬಳಿಕ ಹೊಸ ಸಿಎಂ ಪ್ರಮಾಣ ವಚನದಲ್ಲಿ ಭಾಗಿಯಾಗಿದ್ದರು.
ಇದೀಗ ಮತ್ತೊಮ್ಮೆ ಅವರು ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ರಾಜ್ಯ ಸಭೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಸಾಥ್ ನೀಡಲಿದ್ದಾರೆ. ಇಂದು ಮಧ್ಯಾಹ್ನ 1.30 ಕ್ಕೆ ಖರ್ಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಜೊತೆಯಾಗಲಿದ್ದಾರೆ. ರಾಜ್ಯದಲ್ಲಿ ಸಚಿವ ಸ್ಥಾನಕ್ಕಾಗಿ ಈಗ ಶಾಸಕರು ಲಾಬಿ ನಡೆಸುತ್ತಿರುವಾಗಲೇ ರಾಹುಲ್ ಬೆಂಗಳೂರಿಗೆ ಆಗಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ