Publish Date: Sat, 10 Mar 2018 (06:56 IST)
Updated Date: Sat, 10 Mar 2018 (07:01 IST)
ನವದೆಹಲಿ: ಕಾಂಗ್ರೆಸ್ ತನ್ನ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿದ ಸಂವಾದದ ವಿಡಿಯೋ ಒಂದು ಈಗ ಬಾರಿ ವಿವಾದಕ್ಕೆ ಕಾರಣವಾಗಿ ರಾಹುಲ್ ಗಾಂಧಿ ಅವರನ್ನು ಕೂಡ ಈ ವಿವಾದದಲ್ಲಿ ಸಿಲುಕುವಂತೆ ಮಾಡಿದೆ.
ಸಿಂಗಾಪುರದಲ್ಲಿ ನಡೆದ ರಾಹುಲ್ ಗಾಂಧಿ ಅವರ ಸಂವಾದದ ನಾಲ್ಕೈದು ವಿವಿಧ ವೀಡಿಯೋ ದೃಶ್ಯಗಳನ್ನು ಎಡಿಟ್ ಮಾಡಿ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದು, ಈ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರಸನ್‌ಜೀತ್ ಬಸು ಎಂಬುವವರು ಈ ವಿಡಿಯೋವನ್ನು ಕೂಡಲೇ ಡಿಲೀಟ್ ಮಾಡದಿದ್ದರೆ ಸಿಂಗಾಪುರದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ನಿಮ್ಮ ರಾಜಕೀಯ ನಾಯಕನನ್ನು ವಿವಿಧ ರೀತಿಯಲ್ಲಿ ಪ್ರಸ್ತುತ ಪಡಿಸುವುದಕ್ಕಾಗಿ ನಕಲಿ ವಿಡಿಯೋವನ್ನು ಟ್ವಿಟರ್‌ನಲ್ಲಿ ಪ್ರಕಟಿಸಿದ್ದು ತಪ್ಪು ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ