Publish Date: Fri, 31 Aug 2018 (20:03 IST)
Updated Date: Fri, 31 Aug 2018 (20:07 IST)
ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ತಿತ್ವದಲ್ಲಿದೆ. ಆದರೆ ಸರಕಾರಕ್ಕೆ ಪದೇ ಪದೇ ಮುಜುಗರ ಆಗುವಂತಹ ಹೇಳಿಕೆಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಕರೆದು ಬುದ್ಧಿ ಹೇಳಿ ಅಂತ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ದೋಸ್ತಿ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ನಲ್ಲಿ ಬಿರುಕು ದಿನೆ ದಿನೇ ದೊಡ್ಡದಾಗುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೋಸ್ತಿ ಸರಕಾರದಲ್ಲಿನ ಸಮಸ್ಯೆಗಳನ್ನು ವಿವರಿಸಿದ್ದಾರೆ. ಆಡಳಿತ ಯಂತ್ರವನ್ನು ಇಕ್ಕಟ್ಟಿಗೆ ಸಿಲುಕಿಸುವ ಹಾಗೂ ಸರಕಾರಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಮಾಧ್ಯಮಗಳ ಮುಂದೆ ನೀಡುತ್ತಿದ್ದಾರೆ.
ಸರಕಾರಕ್ಕೆ ಸಮಸ್ಯೆಯಾದರೆ ಅದಕ್ಕೆ ಅವರೇ ಹೊಣೆ ಎಂದು ರಾಹುಲ್ ಗಾಂಧಿ ಮುಂದೆ ಹೇಳಿದ್ದು, ಶೀಘ್ರ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.