Publish Date: Mon, 15 Oct 2018 (17:34 IST)
Updated Date: Mon, 15 Oct 2018 (17:36 IST)
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರ ನಡೆಸುತ್ತಿದ್ದಾರೆ.
ದಾತಿಯಾದಲ್ಲಿನ ಪ್ರಸಿದ್ಧ ಮಾ ಪೀತಾಂಬರ ಪೀಠ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣೆ ಪ್ರಚಾರ ಶುರು ಮಾಡಿದರು. ಮಧ್ಯಪ್ರದೇಶದಲ್ಲಿ ಎರಡು ದಿನ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್, ಪಕ್ಷದ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಇನ್ನಿತರ ಮುಖಂಡರು ರಾಹುಲ್ ಗಾಂಧಿಗೆ ಸಾಥ್ ನೀಡಿದರು.