ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

Krishnaveni K
ಮಂಗಳವಾರ, 25 ನವೆಂಬರ್ 2025 (10:34 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ತಿಕ್ಕಾಟವಾಗುತ್ತಿದೆ. ಈ ನಡುವೆ ರಾಹುಲ್ ಗಾಂಧಿಗೆ ಇದೊಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ಹೆಚ್ಚು ಒಲವಿದೆಯಾ ಎಂಬ ಅನುಮಾನವಿದೆ.

ರಾಜ್ಯದ ಕುರ್ಚಿ ದಂಗಲ್ ಈಗ ದೆಹಲಿಗೆ ತಲುಪಿದೆ. ರಾಜ್ಯದ ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸಿಕೊಂಡು ದೆಹಲಿಗೆ ಹೋಗಿರುವ ಮಲ್ಲಿಕಾರ್ಜುನ ಖರ್ಗೆ ಇಂದೇ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರೂ ಅಚ್ಚರಿಯಿಲ್ಲ.

ನನ್ನ ಕೈಯಲ್ಲಿ ಏನೂ ಮಾಡಲು ಆಗುತ್ತಿಲ್ಲ ಎಂದು ಖರ್ಗೆ  ಕೈಚೆಲ್ಲಿದ್ದರು. ಇದೀಗ ಕರ್ನಾಟಕ ಸಿಎಂ ಕದನವನ್ನು ರಾಹುಲ್ ಗಾಂಧಿ ಬಗೆಹರಿಸಲಿದ್ದಾರೆ. ಹೀಗಾಗಿ ರಾಹುಲ್ ಯಾರ ಪರ ನಿಲ್ಲಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೆಲವು ತಿಂಗಳ ಹಿಂದೆಯೇ ಸಿದ್ದರಾಮಯ್ಯನವರಿಗೆ ನೀವು ಸಿಎಂ ಆಗಿ ಮುಂದುವರಿಯಿರಿ ಎಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನೀವು ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದೀರಿ. ನಿಮ್ಮ ನಾಯಕತ್ವದ ಅಗತ್ಯವಿದೆ ಎಂದು ರಾಹುಲ್ ಹೇಳಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ. ಹೀಗಾಗಿಯೇ ಸಿದ್ದು ಇಷ್ಟು ಆತ್ಮವಿಶ್ವಾಸದಿಂದ ನಾನೇ ಪೂರ್ಣಾವಧಿ ಸಿಎಂ ಎನ್ನುತ್ತಿರುವುದು ಎಂಬ ಗುಸು ಗುಸು ಕೇಳಿಬರುತ್ತಿದೆ.

ರಾಹುಲ್ ಗಾಂಧಿ ಎಲ್ಲೇ ಹೋದರೂ ತಮ್ಮ ಭಾಷಣಗಳಲ್ಲಿ ಅಹಿಂದ ಜನರನ್ನು ಟಾರ್ಗೆಟ್ ಮಾಡಿಯೇ ಮಾತನಾಡುತ್ತಾರೆ. ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ವರ್ಗದವರ ಏಳಿಗೆಯಾಗಬೇಕು ಎನ್ನುತ್ತಿರುತ್ತಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಈಗ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿ ಹೆಚ್ಚು ಒಲವಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments