Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಅಭಿನಂದನೆ

ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಅಭಿನಂದನೆ
ಬೆಂಗಳೂರು , ಗುರುವಾರ, 13 ಏಪ್ರಿಲ್ 2017 (13:45 IST)
ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ್ದರಿಂದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯರನ್ನು ಅಭಿನಂದಿಸಿದ್ದಾರೆ.
 
ಉಪಚುನಾವಣೆ ಫಲಿತಾಂಶ ಬಂದ ನಂತರ ಸಿಎಂ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ ರಾಹುಲ್ ಗಾಂಧಿ ನಾಳೆ ದೆಹಲಿಗೆ ಆಗಮಿಸುವಂತೆ ಬುಲಾವ್ ನೀಡಿದ್ದಾರೆ.
 
ರಾಹುಲ್ ಗಾಂಧಿ ಬುಲಾವ್ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ 21,334 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಗುಂಡ್ಲುಪೇಟೆಯಲ್ಲಿ ಗೀತಾ ಮಹಾದೇವ್ ಪ್ರಸಾದ್ 10877 ಮತಗಳ ಅಂತರದಿಂದ ಜಯಗಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆಯ ಫಲಿತಾಂಶದ ಬಗ್ಗೆ ಯಡಿಯೂರಪ್ಪ, ಈಶ್ವರಪ್ಪ ರಿಯಾಕ್ಷನ್