Publish Date: Sun, 08 Apr 2018 (13:02 IST)
Updated Date: Sun, 08 Apr 2018 (13:05 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದ ಬುಲೆಟ್ ರೈಲು ಯೋಜನೆ ಸಂಪೂರ್ಣ ವಿಫಲವಾಗಿದೆ. ಆ ಯೋಜನೆಗೆ ಸಾಕಷ್ಟು ಹಣ ಖರ್ಚು ಮಾಡಲಾಗಿದೆ. ಅದೆಲ್ಲಾ ವ್ಯರ್ಥವಾಗಿದೆ. ಇಂತಹ ದೊಡ್ಡ ಯೋಜನೆಗೆ ಕೈ ಹಾಕುವ ಮೊದಲು ಯೋಚನೆ ಮಾಡಬೇಕು. ಇದರ ಬದಲು ಇದೇ ಹಣವನ್ನು ರೈಲ್ವೇ ಇಲಾಖೆಯ ಸುಧಾರಣೆಗೆ ಬಳಸಬಹುದಿತ್ತು ಎಂದು ಕೇಂದ್ರದ ವಿರುದ್ಧ ರಾಹುಲ್ ಕಿಡಿ ಕಾರಿದ್ದಾರೆ.
ಸಮಾರಂಭದಲ್ಲಿ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಂದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಕೃಷಿ ಮಾರುಕಟ್ಟೆ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.