Select Your Language

Notifications

webdunia
webdunia
webdunia
webdunia

ಕುಂದಾನಗರಿಯಲ್ಲಿಂದು ರಾಹುಲ್ ಕಾಂಗ್ರೆಸ್ ಸಮಾವೇಶ!

ಕುಂದಾನಗರಿಯಲ್ಲಿಂದು ರಾಹುಲ್ ಕಾಂಗ್ರೆಸ್ ಸಮಾವೇಶ!
ಬೆಳಗಾವಿ , ಶನಿವಾರ, 17 ಡಿಸೆಂಬರ್ 2016 (11:37 IST)
ಕುಂದಾನಗರಿ ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ. 
ನೋಟ್ ಬ್ಯಾನ್ ಆದ ಬಳಿಕ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ಕಪ್ಪು ಹಣದ ವಿರುದ್ಧ ಅಪನಗದೀಕರಣವನ್ನು ಬೆಳಗಾವಿಯಲ್ಲಿ ಸಮರ್ಥಿಸಿಕೊಂಡಿದ್ದರು. ಇದೀಗ ಅದೆ ಸ್ಥಳದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಿ ಮೋದಿ ನೇತೃತ್ವದ ವಿರುದ್ಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾತನಾಡಲಿದ್ದಾರೆ.
 
ಸಮಾವೇಶದ ಸಿದ್ಧತೆ ಹಾಗೂ ಭದ್ರತೆ ಕುರಿತು ಪರಿಶೀಲನೆ ನಡೆಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಧ್ಯಾಹ್ನ 2.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಹುಲ್ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಕ್ರೀಡಾಂಗಣ ತಲುಪಲಿದ್ದಾರೆ. ನಂತರ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹೂಕೋಸಿನಲ್ಲಿ ಇದ್ದದು ಹುಳವಲ್ಲ, ಹಾವು ( ವಿಡಿಯೋ)