Publish Date: Sun, 10 Sep 2023 (19:10 IST)
Updated Date: Sun, 10 Sep 2023 (18:13 IST)
ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿದೇಶಿ ನೆಲದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರಿಸಿದ್ದಾರೆ. ಭಾರತದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಮತ್ತು ದೇಶದ ಪ್ರಜಾಪ್ರಭುತ್ವ ಸಂರಚನೆಗಳನ್ನು ನಿಗ್ರಹಿಸುವ ಈ ಪ್ರಯತ್ನದ ಬಗ್ಗೆ ಯುರೋಪ್ ಒಕ್ಕೂಟವೂ ಕಳವಳ ಹೊಂದಿದೆ ಎಂದಿದ್ದಾರೆ,ಬೆಲ್ಜಿಯಂನಿಂದ ಯುರೋಪ್ ಪ್ರವಾಸ ಆರಂಭಿಸಿರುವ ರಾಹುಲ್ ಗಾಂಧಿ ಬ್ರಸೆಲ್ಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದಲ್ಲಿ ತಾರತಮ್ಯ ಮತ್ತು ಹಿಂಸಾಚಾರ ಹೆಚ್ಚುತ್ತಿದೆ ಮತ್ತು ನಮ್ಮ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆಯುತ್ತಿದೆ. ಅದು ಎಲ್ಲರಿಗೂ ತಿಳಿದಿದೆ ಅಂತಾ ಕಿಡಿಕಾರಿದ್ದಾರೆ.