Publish Date: Mon, 10 Apr 2023 (17:20 IST)
Updated Date: Mon, 10 Apr 2023 (17:20 IST)
ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ
ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರ ವಯನಾಡ್‌ನಲ್ಲಿ ನಾಳೆ ರೋಡ್ ಶೋ ನಡೆಸಲಿದ್ದಾರೆ. ಅನರ್ಹಗೊಂಡ ಬಳಿಕ ಮೊದಲ ಸಲ ಅವರು ವಯನಾಡ್‌ಗೆ ಆಗಮಿಸುತ್ತಿರುವುದರಿಂದ ಅದ್ದೂರಿ ಸ್ವಾಗತ ಕೋರಲು ಕೇರಳ ಕಾಂಗ್ರೆಸ್ ಭಾರಿ ತಯಾರಿ ನಡೆಸಿದೆ.. ಮೋದಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯವು ಮಾರ್ಚ್ 23ರಂದು ತೀರ್ಪು ನೀಡಿತ್ತು. 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.