ಬೆಂಗಳೂರು: ಬೆಂಗಳೂರು ಪಬ್‌ಗಳ ಮೇಲೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಜಂಟಿಯಾಗಿ ನಡೆಸಿದ ದಾಳಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.
ಬೆಂಗಳೂರು ಪೊಲೀಸರು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್ ಮುಕ್ತ ಬೆಂಗಳೂರು ಮಾಡಲು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಜಂಟಿಯಾಗಿ ಬೆಂಗಳೂರಿನ ಪಬ್‌ಗಳ ಮೇಲೆ ದಾಳಿ ನಡೆಸಿ ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಎಫ್ಆರ್ಆರ್ಒ ಮತ್ತು ಸಿಸಿಬಿ ಅಧಿಕಾರಿಗಳು ಜಂಟಿಯಾಗಿ ಶನಿವಾರ (ಜುಲೈ 12) ರ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ಮಿರಾಜ್ ಪಬ್ ಮತ್ತು ಕೋರಮಂಗಲದಲ್ಲಿರುವ ಸನ್ಬರ್ನ್ ಪಬ್ ಮೇಲೆ ದಾಳಿ ಮಾಡಿ ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಮತ್ತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.
ವಿದೇಶದಿಂದ ಭಾರತಕ್ಕೆ ಓದಲು ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದಳು. ಈ ಮಾಹಿತಿ ತಿಳಿದ ಸಿಸಿಬಿ ಹಾಗೂ ಬೆಂಗಳೂರಿನ ಚಿಕ್ಕಜಾಲ ಠಾಣೆಯ ಪೊಲೀಸರು ಕಾರ್ಯಾಚರಣೆ ಡ್ರಗ್ ಪೆಡ್ಲರ್ ಪ್ರಿನ್ಸಸ್ಳನ್ನು ಬಂಧಿಸಿದ್ದರು. ಪ್ರಿನ್ಸಸ್ ಬಳಿ ಇದ್ದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದರು.