Webdunia - Bharat's app for daily news and videos

Install App

ಬೆಂಗಳೂರಿನ ಪಬ್‌ಗಳ ಮೇಲೆ ದಾಳಿ: 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಜತೆ ವಿದೇಶಿ ಪೆಡ್ಲರ್‌ಗಳು ವಶಕ್ಕೆ

Sampriya
ಭಾನುವಾರ, 13 ಜುಲೈ 2025 (18:28 IST)
ಬೆಂಗಳೂರು: ಬೆಂಗಳೂರು ಪಬ್‌ಗಳ ಮೇಲೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಜಂಟಿಯಾಗಿ ನಡೆಸಿದ ದಾಳಿಯಲ್ಲಿ ವಿದೇಶಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. 

ಬೆಂಗಳೂರು ಪೊಲೀಸರು ಡ್ರಗ್ಸ್​ ಮಾರಾಟ ಮತ್ತು ಸೇವನೆ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್​ ಮುಕ್ತ ಬೆಂಗಳೂರು ಮಾಡಲು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಜಂಟಿಯಾಗಿ ಬೆಂಗಳೂರಿನ ಪಬ್​ಗಳ ಮೇಲೆ ದಾಳಿ ನಡೆಸಿ ವಿದೇಶಿ ಡ್ರಗ್​​ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ.

ಎಫ್​ಆರ್​ಆರ್​ಒ ಮತ್ತು ಸಿಸಿಬಿ ಅಧಿಕಾರಿಗಳು ಜಂಟಿಯಾಗಿ ಶನಿವಾರ (ಜುಲೈ 12) ರ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ಮಿರಾಜ್ ಪಬ್ ಮತ್ತು ಕೋರಮಂಗಲದಲ್ಲಿರುವ ಸನ್​ಬರ್ನ್ ಪಬ್ ಮೇಲೆ ದಾಳಿ ಮಾಡಿ ವಿದೇಶಿ ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. 

ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಮತ್ತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ. 

ವಿದೇಶದಿಂದ ಭಾರತಕ್ಕೆ ಓದಲು ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಬೆಂಗಳೂರಿನಲ್ಲಿ ಡ್ರಗ್​ ಪೆಡ್ಲಿಂಗ್​ ಮಾಡುತ್ತಿದ್ದಳು. ಈ ಮಾಹಿತಿ ತಿಳಿದ ಸಿಸಿಬಿ ಹಾಗೂ ಬೆಂಗಳೂರಿನ ಚಿಕ್ಕಜಾಲ ಠಾಣೆಯ ಪೊಲೀಸರು ಕಾರ್ಯಾಚರಣೆ ಡ್ರಗ್​ ಪೆಡ್ಲರ್​ ಪ್ರಿನ್ಸಸ್​​ಳನ್ನು ಬಂಧಿಸಿದ್ದರು. ಪ್ರಿನ್ಸಸ್​ ಬಳಿ ಇದ್ದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments