Publish Date: Sat, 26 Mar 2016 (06:56 IST)
Updated Date: Sat, 26 Mar 2016 (07:04 IST)
ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ರಾಜ್ಯಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಕಳಸಾ ಬಂಡೂರಿ, ಮಹದಾಯಿ ಯೋಜನೆಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಾಟಾಳ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತದೆ.
ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರೈಲು ತಡೆ ಚಳವಳಿಯನ್ನು ನಡೆಸಲಾಗುತ್ತಿದೆ. ಪ್ರತಿಭಟನೆಗೆ 500ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.
ರೈತರು ಮತ್ತು ಕನ್ನಡಪರ ಸಂಘಟನೆಗಳು ಇದರಲ್ಲಿ ಭಾಗವಹಿಸಲಿವೆ. ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಧಾರವಾಡ, ಮೈಸೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ರೈಲು ತಡೆ ಚಳವಳಿ ನಡೆಸಲಾಗುತ್ತದೆ.