Webdunia - Bharat's app for daily news and videos

Install App

ಬಹುನಿರೀಕ್ಷಿತ ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ರೈಲ್ವೆ ಸಚಿವ ಗ್ರೀನ್‌ಸಿಗ್ನಲ್‌

Sampriya
ಮಂಗಳವಾರ, 11 ಫೆಬ್ರವರಿ 2025 (14:12 IST)
Photo Courtesy X
ಬೆಂಗಳೂರು:  ಬೆಳಗಾವಿ- ಬೆಂಗಳೂರು ಮಧ್ಯೆ ಸಂಚರಿಸುವವರಿಗೆ ಶುಭಸುದ್ದಿ. ಈ ನಗರಗಳ ಮಧ್ಯೆ ಬಹುನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗ್ರೀನ್‌ಸಿಗ್ನಲ್‌ ನೀಡಿದ್ದಾರೆ.

ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ, ಧಾರವಾಡ ಸಂಸದ ಪ್ರಹ್ಲಾದ್‌ ಜೋಶಿ ಈ ಕುರಿತು ಮಾಹಿತಿ ನೀಡಿದ್ದು, ಶೀಘ್ರದಲ್ಲಿಯೇ ಬೆಳಗಾವಿ ಮತ್ತು ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು  ತಿಳಿಸಿದ್ದಾರೆ.

ಈ ರೈಲು ಸಂಚಾರದಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದ ಜನತೆಗೆ ಬೆಂಗಳೂರು ಪ್ರಯಾಣಕ್ಕೆ ಅನುಕೂಲವಾಗಲಿದೆ. ನಮ್ಮ ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ಸಮ್ಮತಿ ಸೂಚಿಸಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ಸಚಿವ ಪ್ರಹ್ಲಾದ್‌ ಜೋಶಿ  ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರೊಂದಿಗೆ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸಿದ್ದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಅವರೂ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಜೋಶಿ ಅವರು ಕೆಲ ದಿನಗಳ ಹಿಂದೆ ಹುಬ್ಬಳ್ಳಿಯ ಸಂಸದರ ಕಾರ್ಯಾಲಯದಲ್ಲಿ ನೈರುತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್, ಡಿಆರ್‌ಎಂ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಬೆಳಗ್ಗೆ ಬೆಳಗಾವಿಯಿಂದ ವಂದೇ ಭಾರತ್‌ ರೈಲು ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳೆ ನಿಗದಿಗೊಳಿಸಿ ಎಂದು ಅವರು ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ರೈಲ್ವೆ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದರು. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವರದಿ ಪರಿಗಣಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments