Publish Date: Mon, 25 Jun 2018 (16:58 IST)
Updated Date: Mon, 25 Jun 2018 (17:19 IST)
ರೈಲ್ವೆ ಟಿಕೆಟ್‍ಗಳನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಆರ್ ಪಿ ಎಫ್ ಪೊಲೀಸರು ದಾಳಿ ನಡೆಸಿದ್ದಾರೆ.
ನಗರದ ದುರ್ಗದ ಬೈಲ್‍ನಲ್ಲಿರುವ ಕೆಲವು ಅಂಗಡಿಗಳಲ್ಲಿ ಅಕ್ರಮವಾಗಿ ರೈಲ್ವೆ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಅಂಗಡಿಯಲ್ಲಿರುವ ಪ್ರಿಂಟಿಂಗ್ ಮಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ದಿನೇಶ್ ಎಂಬಾತ ಸೇರಿದಂತೆ ಇನ್ನಿಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಆರ್ ಪಿ ಎಫ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.