ಕಳೆದ ಮೂರು ದಿನದಿಂದ ಶಿವಮೊಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ವರ್ಷಧಾರೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಳೆ, ಹಳ್ಳ, ಕೊಳ್ಳಗಳಲ್ಲಿ ಮತ್ತೆ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸರಾಸರಿ 59 ಮಿ.ಮೀ ಮಳೆಯಾಗಿದೆ. ಹೊಸನಗರ, ತೀರ್ಥಹಳ್ಳಿ, ಸಾಗರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಇನ್ನು, ಜೋರು ಮಳೆಯಾಗುತ್ತಿರುವದರಿಂದ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಮತ್ತು ಭದ್ರಾ ಜಲಾಶಯಗಳ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು ಒಳ ಹರಿವಿನಷ್ಟ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.