Publish Date: Wed, 14 Jul 2021 (16:31 IST)
Updated Date: Wed, 14 Jul 2021 (16:33 IST)
ಬೆಂಗಳೂರು: ಪೂರ್ವ ಅರಬ್ಬೀಸಮುದ್ರದ ಕರ್ನಾಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿತರುವ ವಿಸ್ತರಿಸಿದ ಪ್ರದೇಶ ಇದೆ. ಕಚ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ14ರಿಂದ 18ರವರೆಗೆ ಭಾರೀ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಹಾಗೂ ಅತೀ ಭಾರೀ, ಕೆಲವೊಮ್ಮೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಮತ್ತು ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾಾರೆ.
ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ ಜಿಲ್ಲೆಗಳ ಕೆಲವೆಡೆ ಭಾರೀ ಹಾಗೂತಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಜುಲೈ 18ರಂದು ಯೆಲ್ಲೋ ಅಲರ್ಟ್, ಜುಲೈ 15, 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಮಾಹಿತಿ ನೀಡಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ:
ನೈರುತ್ಯ ಮುಂಗಾರು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಧವಾರ ಸಾಮಾನ್ಯವಗಿತ್ತು. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಾಪಕ ಮಳೆಯಾಗಿದೆ. ಮುಖ್ಯವಾಗಿ, ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 13 ಸೆಂ.ಮೀ, ಸುಬ್ರಮಣ್ಯದಲ್ಲಿ 10 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಉಪ್ಪಿನಂಗಡಿಯಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ.